ಚಳಿಗಾಲದ ಅಧಿವೇಶನಕ್ಕೆ ಸಿದ್ಧಗೊಂಡಿರುವ ಬೆಳಗಾವಿಯ ಸುವರ್ಣ ವಿಧಾನಸೌಧ..!


ಬೆಳಗಾವಿ: ಸೋಮವಾರದಿಂದ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದ ಸಿದ್ಧತೆಗಳು ಬಹುತೇಕ ಅಂತಿಮ ಹಂತಕ್ಕೆ ತಲುಪಿವೆ.

ಬೆಳಗಾವಿ ನಗರದ ರಸ್ತೆಗಳು ಕೂಡ ಅಧಿವೇಶನದ ಕಾರಣಕ್ಕೆ ದುರಸ್ತಿ ಭಾಗ್ಯ ಕಾಣುತ್ತಿವೆ. ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಸಿಬ್ಬಂದಿ ತರಾತುರಿಯಲ್ಲಿ ರಸ್ತೆ ರಿಪೇರಿ ಕಾರ್ಯ ಕೈಗೊಂಡಿದ್ದಾರೆ.

ಬೆಳಗಾವಿ ಅಧಿವೇಶನದಲ್ಲೇ ಮತಾಂತರ ತಡೆ ವಿಧೇಯಕ: ಕಾಂಗ್ರೆಸ್‌ ವಿರೋಧ, ಬಿಜೆಪಿ ಸಮರ್ಥನೆ
ಶಾಸಕರು, ಸಚಿವರು, ಹಿರಿಯ ಅಧಿಕಾರಿಗಳ ಸಂಚಾರಕ್ಕಾಗಿ ರಾಜ್ಯದ ಬೇರೆ ಬೇರೆ ಕಡೆಯ ಸರಕಾರಿ ಕಚೇರಿಗಳಿಂದ 30 ಕಾರುಗಳು ಹಾಗೂ 20 ಖಾಸಗಿ ಇನ್ನೋವಾ ಕಾರುಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಇತರ ಅಧಿಕಾರಿಗಳು, ಸಿಬ್ಬಂದಿ ಸಂಚಾರಕ್ಕಾಗಿ ಒಟ್ಟು 300ಕ್ಕೂ ಹೆಚ್ಚು ಕಾರುಗಳನ್ನು ಬೆಳಗಾವಿಗೆ ತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಧಿವೇಶನದ ಭದ್ರತೆಗಾಗಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಪೊಲೀಸ್‌ ಅಧಿಕಾರಿಗಳು ಸೇರಿದಂತೆ 4500ಕ್ಕೂ ಹೆಚ್ಚು ಸಿಬ್ಬಂದಿ ಆಗಮಿಸುತ್ತಿದ್ದಾರೆ. ಅವರಿಗೆ ಈ ಬಾರಿ ಉತ್ತಮ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಸುವರ್ಣ ವಿಧಾನಸೌಧದ ಬಳಿಯ ಶಿಂದೊಳ್ಳಿ ಗ್ರಾಮದಲ್ಲಿ ತಾತ್ಕಾಲಿಕ ಟೌನ್‌ಶಿಪ್‌ ನಿರ್ಮಿಸಲಾಗಿದೆ. ಮಹಿಳಾ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಛೆಯ ಕೆಎಸ್‌ಆರ್‌ಪಿಯಲ್ಲಿ ಹಾಗೂ ಕಂಗ್ರಾಳಿಯಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.

"2018ರ ಬಳಿಕ ಬೆಳಗಾವಿಯಲ್ಲಿ ಅಧಿವೇಶನ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಯಾವುದೇ ಕಾರಣಕ್ಕೂ ಅಧಿವೇಶನ ನಡೆಸಲೇಬೇಕು ಎಂದು ಒತ್ತಾಯಿಸಿದ್ದೆ. ಅದರಂತೆ ಮುಖ್ಯಮಂತ್ರಿಗಳು ಅಧಿವೇಶನದ ಆಯೋಜನೆಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಅಧಿವೇಶನಕ್ಕೆ ಎಲ್ಲ ಸಿದ್ಧತೆಗಳು ಸಮರ್ಪಕವಾಗಿ ಸಾಗಿದೆ," ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

Post a Comment

1 Comments

  1. youtube.com Videos on Vimeo - Videoodl
    Watch videos about the video you're watching on Vimeo, the world's largest free website. Videos about Vimeo: download youtube videos to mp3 videos on Vimeo, the world's largest free website.

    ReplyDelete